Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ತಂದೆತಾಯಿಗಳನ್ನು ಸನ್ಮಾನಿಸುವುದು

ಸಂಬಂಧಗಳು

ತಂದೆತಾಯಿಗಳನ್ನು ಸನ್ಮಾನಿಸುವುದು ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ವಿಮೋ 20:12“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.
ಎಫೆ 6:1ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು.
ಎಫೆ 6:2–3ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, “ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು, ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.”
ಧರ್ಮೋ 5:16“ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಕ್ಷೇಮವಾಗಿ ಇರುವಿ, ಮತ್ತು ನಿನಗೆ ಒಳ್ಳೆಯದಾಗುವುದು.
ಕೊಲೊ 3:20ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
ಜ್ಞಾನೋ 23:22ಹೆತ್ತ ತಂದೆಯ ಮಾತಿಗೆ ಕಿವಿಗೊಡು, ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ.
ಯಾಜ 19:3“‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.
ಮಾರ್ಕ 7:10‘ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು ‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ.
ಜ್ಞಾನೋ 1:8ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.
ಮತ್ತಾ 19:19ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು” ಇವುಗಳೇ ಅಂದನು.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು