Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ನಿರೀಕ್ಷೆ

ಭಾವನೆಗಳು

ನಿರೀಕ್ಷೆ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಯೆರೆ 29:11ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
ರೋಮಾ 15:13ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.
ಯೆಶಾ 40:31ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.
ಪ್ರಕ 21:4ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.
ರೋಮಾ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
ಇಬ್ರಿ 11:1ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ.
ರೋಮಾ 12:12ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.
ರೋಮಾ 15:4ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.
1 ಪೇತ್ರ 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
ರೋಮಾ 5:5ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು