Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಅತಿಥಿಸತ್ಕಾರ

ಸಂಬಂಧಗಳು

ಅತಿಥಿಸತ್ಕಾರ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಇಬ್ರಿ 13:2ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.
1 ಪೇತ್ರ 4:9ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.
ರೋಮಾ 12:13ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.
ಯಾಜ 19:34ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತ ದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.
ಲೂಕ 14:12–14ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನೆಂದರೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ, ನಿನ್ನ ಅಣ್ಣತಮ್ಮಂದಿರನ್ನಾಗಲಿ, ನಿನ್ನ ಬಂಧುಬಾಂಧವರನ್ನಾಗಲಿ, ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವುದು. ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ, ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.”
ಅ. ಕೃ 28:2ಅನ್ಯಭಾಷೆಯವರಾದ ಆ ದ್ವೀಪದವರು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆಯು ಆಗಲೇ ಹೊಯ್ದು ಚಳಿಯಾಗುತ್ತಿದ್ದುದರಿಂದ, ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.
ಮಾರ್ಕ 9:41ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.
ಮತ್ತಾ 25:35ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;
ಧರ್ಮೋ 10:19ಐಗುಪ್ತದೇಶದಲ್ಲಿ ನೀವೇ ಪರದೇಶಿಗಳಾಗಿದ್ದದ್ದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿರಿ.
ಮತ್ತಾ 25:40ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು