ಮುಖಪುಟ › ಬೈಬಲ್ ಏನು ಹೇಳುತ್ತದೆ › ದೀನತೆ
ಜೀವನ ಮತ್ತು ಕೆಲಸ
ದೀನತೆ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
2 ಪೂರ್ವ 7:14
ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.1 ಪೇತ್ರ 5:6
ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.ಯಾಕೋ 4:6
ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.ಜ್ಞಾನೋ 22:4
ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.ಜ್ಞಾನೋ 11:2
ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ, ದೀನತೆಯಲ್ಲಿ ಸುಜ್ಞಾನ.ಯಾಕೋ 4:10
ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.ಮೀಕ 6:8
ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?ಎಫೆ 4:2
ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.1 ಪೇತ್ರ 5:5
ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”ಕೊಲೊ 3:12
ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು