Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ರೋಗ ಮತ್ತು ಸ್ವಸ್ಥತೆ

ಕಷ್ಟದ ಸಮಯಗಳು

ರೋಗ ಮತ್ತು ಸ್ವಸ್ಥತೆ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 15 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಯಾಕೋ 5:14–15ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.
ಕೀರ್ತ 41:3ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ, ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ.
ಕೀರ್ತ 103:3ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ, ಸಮಸ್ತ ರೋಗಗಳನ್ನು ವಾಸಿಮಾಡುವವನೂ,
ಜ್ಞಾನೋ 17:22ಹರ್ಷಹೃದಯವು ಒಳ್ಳೆಯ ಔಷಧ, ಕುಗ್ಗಿದ ಮನದಿಂದ ಅನಾರೋಗ್ಯ.
3 ಯೋಹಾ 1:2ಪ್ರಿಯನೇ, ನೀನು, ನಿನ್ನ ಆತ್ಮ ವಿಷಯದಲ್ಲಿ ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ಅಭಿವೃದ್ಧಿಹೊಂದಿ, ಸುಕ್ಷೇಮವಾಗಿ ಇರಬೇಕೆಂದು ನಾನು ಪ್ರಾರ್ಥಿಸುತ್ತೇನೆ.
ಯೆರೆ 17:14ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನಗೆ ಸ್ತುತ್ಯನು.
ವಿಮೋ 15:26ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.
ವಿಮೋ 23:25ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು.
ಯಾಕೋ 5:16ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.
ಯೆರೆ 32:27“ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?
ಜ್ಞಾನೋ 4:20–22ಕಂದಾ, ನನ್ನ ಮಾತುಗಳನ್ನು ಆಲಿಸು, ನನ್ನ ನುಡಿಗಳಿಗೆ ಕಿವಿಗೊಡು. ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದಿರಲಿ, ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ. ಅವುಗಳನ್ನು ಹೊಂದುವವರಿಗೆ ಅವು ಜೀವವು, ದೇಹಕ್ಕೆಲ್ಲಾ ಅವೇ ಆರೋಗ್ಯವು.
ಯೋಹಾ 11:4ಯೇಸು ಇದನ್ನು ಕೇಳಿ, “ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು” ಎಂದು ಹೇಳಿದನು.
ಮಾರ್ಕ 5:26ಅನೇಕ ವೈದ್ಯರ ಚಿಕಿತ್ಸೆಯಿಂದ ಆಕೆಯು ಬಹು ಕಷ್ಟವನ್ನು ಅನುಭವಿಸಿ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.
ಮತ್ತಾ 4:23–24ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು. ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.
ಕೀರ್ತ 30:2ಯೆಹೋವನೇ, ನನ್ನ ದೇವರೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು