Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಹೊಟ್ಟೆಕಿಚ್ಚು ಮತ್ತು ಅಸೂಯೆ

ಭಾವನೆಗಳು

ಹೊಟ್ಟೆಕಿಚ್ಚು ಮತ್ತು ಅಸೂಯೆ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 15 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಜ್ಞಾನೋ 14:30ಶಾಂತಗುಣವು ದೇಹಕ್ಕೆ ಜೀವಾಧಾರವು, ಕ್ರೋಧವು ಎಲುಬಿಗೆ ಕ್ಷಯವು.
ಯಾಕೋ 3:16ಮತ್ಸರವೂ, ಹಗೆತನವೂ ಇರುವ ಕಡೆ ಗೊಂದಲಗಳೂ, ಸಕಲ ವಿಧದ ನೀಚ ಕೃತ್ಯಗಳೂ ಇರುವವು.
ಜ್ಞಾನೋ 27:4ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರಕ್ಕೆ ಎದುರಾಗಿ ಯಾರು ನಿಂತಾರು?
ಗಲಾ 5:19–21ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ, ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ, ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.
1 ಕೊರಿ 3:3ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?
1 ಕೊರಿ 13:4ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ.
ಯಾಕೋ 3:14ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
ವಿಮೋ 20:17“ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.”
ಯಾಕೋ 4:2–3ನೀವು ಬಯಸಿದ್ದು ಹೊಂದದೆ ಇದ್ದೀರಿ. ನೀವು ಕೊಲೆ ಮಾಡಿದರೂ, ಹೊಟ್ಟೆಕಿಚ್ಚುಪಟ್ಟರೂ ಬಯಸಿದ್ದನ್ನು ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಜಗಳವಾಡುತ್ತೀರಿ. ಅದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ಪಡೆದುಕೊಳ್ಳಲಾಗುತ್ತಿಲ್ಲ. ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಾಭಿಲಾಷೆಗಳಿಗಾಗಿ ದುರುಪಯೋಗಪಡಿಸಿಕೊಳ್ಳಬೇಕೆಂಬ ದುರುದ್ದೇಶದಿಂದ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುತ್ತಿಲ್ಲ.
ಯೋಬ 5:2ಕೋಪದಿಂದ ಮೂರ್ಖನಿಗೆ ನಾಶವು, ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ.
ಪ್ರಸ 4:4ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
ಜ್ಞಾನೋ 23:17ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಯೆಹೋವನಲ್ಲಿ ನಿರಂತರವಾಗಿ ಭಯಭಕ್ತಿಯುಳ್ಳವನಾಗಿರು.
ಅ. ಕೃ 7:9“ಪೂರ್ವಿಕರು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,
ಗಲಾ 5:26ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ.
1 ಪೇತ್ರ 2:1ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು