Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಸಂತೋಷ

ಭಾವನೆಗಳು

ಸಂತೋಷ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 14 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಫಿಲಿಪ್ಪಿ 4:4ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ.
ಕೀರ್ತ 144:15ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು, ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು.
ಜ್ಞಾನೋ 15:13ಹರ್ಷ ಹೃದಯದಿಂದ ಹಸನ್ಮುಖ, ಮನೋವ್ಯಥೆಯಿಂದ ಆತ್ಮಭಂಗ.
ಜ್ಞಾನೋ 17:22ಹರ್ಷಹೃದಯವು ಒಳ್ಳೆಯ ಔಷಧ, ಕುಗ್ಗಿದ ಮನದಿಂದ ಅನಾರೋಗ್ಯ.
ಕೀರ್ತ 37:4ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.
ಪ್ರಸ 3:12–13ಮನುಷ್ಯರು ತಮ್ಮ ಜೀವಮಾನದಲ್ಲೆಲ್ಲಾ ಉಲ್ಲಾಸವಾಗಿ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಅವರಿಗೆ ಮೇಲಿಲ್ಲವೆಂದು ನಾನು ಗ್ರಹಿಸಿದ್ದೇನೆ. ಇದಲ್ಲದೆ ಪ್ರತಿಯೊಬ್ಬನೂ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ನಾನಾ ಪ್ರಯಾಸಗಳಲ್ಲಿಯೂ ಸುಖವನ್ನನುಭವಿಸುವುದು ದೇವರ ಅನುಗ್ರಹವೇ ಎಂದು ನನಗೆ ಗೊತ್ತಿದೆ.
ರೋಮಾ 15:13ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.
ರೋಮಾ 12:12ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.
ಕೀರ್ತ 16:11ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.
ಯೋಹಾ 16:24ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು.
ಗಲಾ 5:22–23ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.
ಕೀರ್ತ 34:8ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.
ಯೆಶಾ 26:3–4ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ. ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ.
ಯೆರೆ 29:11ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು