ಮುಖಪುಟ › ಬೈಬಲ್ ಏನು ಹೇಳುತ್ತದೆ › ನ್ಯಾಯ
ಜೀವನ ಮತ್ತು ಕೆಲಸ
ನ್ಯಾಯ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಮೀಕ 6:8
ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?ಯಾಜ 19:15
“‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.ವಿಮೋ 23:1–3
ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು. ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಆದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು. ಇದಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.ಧರ್ಮೋ 1:16–17
ಆ ನ್ಯಾಯಾಧಿಪತಿಗಳಿಗೆ ನಾನು ಆ ಕಾಲದಲ್ಲಿ ಅಪ್ಪಣೆಮಾಡಿ, “ನೀವು ಸ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು. ಅವರು ಇಸ್ರಾಯೇಲರೊಡನೆ ವ್ಯಾಜ್ಯವಾಡಿದರೂ, ಅನ್ಯರೊಡನೆ ವ್ಯಾಜ್ಯವಾಡಿದರೂ ನೀವು ನ್ಯಾಯದ ಪ್ರಕಾರವೇ ತೀರ್ಪುಮಾಡಬೇಕು. ನ್ಯಾಯವಿಚಾರಣೆ ಮಾಡುವಾಗ ಮುಖದಾಕ್ಷಿಣ್ಯಮಾಡದೆ, ಪ್ರಮುಖರನ್ನೂ ಹಾಗು ಅಲ್ಪರನ್ನೂ ಸಮಾನವಾಗಿ ಕಾಣಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕೆ ಆಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು” ಎಂದು ಹೇಳಿದೆನು.ಯೆಶಾ 1:17
ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”ಆಮೋ 5:24
ಅದರ ಬದಲಾಗಿ ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಹರಿಯಲಿ.ಜ್ಞಾನೋ 21:15
ನ್ಯಾಯಮಾರ್ಗವು ಶಿಷ್ಟರಿಗೆ ಸಂತೋಷ, ಕೆಡುಕರಿಗೆ ಕೇಡು.ಯೆಶಾ 30:18
ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.ಕೀರ್ತ 33:5
ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ.ಯೆಶಾ 61:8
ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು