Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ದಯೆ

ಸಂಬಂಧಗಳು

ದಯೆ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಎಫೆ 4:32ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.
ಕೊಲೊ 3:12ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
ಲೂಕ 6:35ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.
ಜ್ಞಾನೋ 11:17ದಯಾಪರನಿಗೆ ಉಪಕಾರವಾಗುವುದು, ಕ್ರೂರನು ತನ್ನ ಶರೀರವನ್ನು ಹಿಂಸಿಸುವನು.
ಮತ್ತಾ 7:12ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.
ಮಾರ್ಕ 6:34ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.
1 ಕೊರಿ 13:4ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ.
ಗಲಾ 6:2ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.
ಜ್ಞಾನೋ 19:17ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.
1 ಯೋಹಾ 3:18ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು