Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಸೋಮಾರಿತನ

ಜೀವನ ಮತ್ತು ಕೆಲಸ

ಸೋಮಾರಿತನ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 15 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಜ್ಞಾನೋ 10:4ಜೋಲುಗೈ ದಾರಿದ್ರ್ಯ, ಚುರುಕು ಕೈ ತರುವುದು ಐಶ್ವರ್ಯ.
2 ಥೆಸ 3:10ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಊಟಮಾಡಬಾರದು” ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ.
ಜ್ಞಾನೋ 6:9ಸೋಮಾರಿಯೇ, ಎಷ್ಟು ಹೊತ್ತು ನಿದ್ರೆ? ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವಿ?
ಜ್ಞಾನೋ 13:4ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.
ಕೊಲೊ 3:23ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.
ಜ್ಞಾನೋ 20:4ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?
ಜ್ಞಾನೋ 6:6ಸೋಮಾರಿಯೇ, ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ಪಡೆದುಕೋ.
ಜ್ಞಾನೋ 21:25ಸೋಮಾರಿಯ ಆಶೆಯು ಅವನನ್ನು ಕೊಲ್ಲುವುದು, ಅವನ ಕೈಗಳು ದುಡಿಯಲಾರವು.
ಜ್ಞಾನೋ 18:9ಕೆಲಸಗಳ್ಳನು ಕೆಡುಕನಿಗೆ ತಮ್ಮ.
ಜ್ಞಾನೋ 20:13ನಿದ್ರಾನಿರತನಾಗಿರಬೇಡ! ಬಡವನಾದೀಯೆ, ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ.
ಜ್ಞಾನೋ 12:24ಚುರುಕುಗೈಯವನಿಗೆ ರಾಜ್ಯಾಧಿಕಾರ, ಮೈಗಳ್ಳನಿಗೆ ದಾಸತ್ವದ ಬದುಕು.
ಜ್ಞಾನೋ 14:23ಶ್ರಮೆಯಿಂದ ಸಮೃದ್ಧಿ, ಹರಟೆಯಿಂದ ಕೊರತೆ.
2 ಥೆಸ 3:11–12ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ. ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ.
ಜ್ಞಾನೋ 22:13“ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದ್ದಿತು” ಎಂಬುದು ಸೋಮಾರಿಯ ನೆವ.
ಜ್ಞಾನೋ 19:15ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು