Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಒಂಟಿತನ

ಭಾವನೆಗಳು

ಒಂಟಿತನ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 15 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಯೆಶಾ 41:10ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
ಆದಿ 2:18ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.
ಇಬ್ರಿ 13:5ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.
ಧರ್ಮೋ 31:6ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.
ಕೀರ್ತ 27:10ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು.
ಕೀರ್ತ 68:5–6ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ, ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ. ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ; ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ. ದ್ರೋಹಿಗಳಾದರೋ ಮರುಭೂಮಿಯಲ್ಲಿ ಉಳಿಯಬೇಕಾಗುವುದು.
ಮತ್ತಾ 28:20ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.
ಕೀರ್ತ 23:4ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
ಕೀರ್ತ 46:11 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು. ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಪ್ರಸ 4:9–10ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು. ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು. ಒಬ್ಬನು ಬಿದ್ದರೆ, ಇನ್ನೊಬ್ಬನು ತನ್ನ ಸ್ನೇಹಿತನನ್ನು ಮೇಲಕ್ಕೆ ಎಬ್ಬಿಸುವನು. ಒಬ್ಬನು ಒಬ್ಬಂಟ್ಟಿಗನಾಗಿ ಬಿದ್ದರೆ, ಅವನನ್ನು ಮೇಲಕ್ಕೆ ಎಬ್ಬಿಸುವವನು ಯಾರೂ ಇಲ್ಲ, ಅವನ ಗತಿ ದುರ್ಗತಿಯೇ.
ಯೆಹೋ 1:9ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.
ಜ್ಞಾನೋ 18:1ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು.
ಇಬ್ರಿ 13:6ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
ಕೀರ್ತ 34:18ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
ಯೋಹಾ 14:18“ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು