Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಪ್ರೀತಿ

ಸಂಬಂಧಗಳು

ಪ್ರೀತಿ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 15 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

1 ಯೋಹಾ 4:8ಪ್ರೀತಿ ಇಲ್ಲದವನು ದೇವರನ್ನು ಬಲ್ಲವನಲ್ಲ. ಏಕೆಂದರೆ ದೇವರು ಪ್ರೀತಿಸ್ವರೂಪನಾಗಿದ್ದಾನೆ.
ಯೋಹಾ 3:16“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
1 ಕೊರಿ 13:4–6ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ. ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ. ಅನ್ಯಾಯದಲ್ಲಿ ಸಂತೋಷಪಡುವುದಿಲ್ಲ ಆದರೆ ಸತ್ಯದಲ್ಲಿ ಸಂತೋಷಪಡುತ್ತದೆ.
1 ಪೇತ್ರ 4:8ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.
1 ಕೊರಿ 13:13ಹೀಗಿರುವುದರಿಂದ, ನಂಬಿಕೆ, ನಿರೀಕ್ಷೆ, ಪ್ರೀತಿ ಈ ಮೂರೇ ನಿಲ್ಲುತ್ತದೆ. ಇವುಗಳಲ್ಲಿ ದೊಡ್ಡದು ಪ್ರೀತಿಯೇ.
1 ಕೊರಿ 16:14ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
ಯೋಹಾ 13:34–35ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ. ನಿಮ್ಮೊಳಗೆ ಪರಸ್ಪರ ಪ್ರೀತಿಯಿರುವುದಾದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು” ಎಂದನು.
ಗಲಾ 5:13ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
ಯೋಹಾ 15:13ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.
1 ಯೋಹಾ 3:18ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.
ರೋಮಾ 8:38–39ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ, ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.
ರೋಮಾ 5:8ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.
ಜ್ಞಾನೋ 10:12ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.
1 ಕೊರಿ 13:7ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ.
ಗಲಾ 5:22–23ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು