ಮುಖಪುಟ › ಬೈಬಲ್ ಏನು ಹೇಳುತ್ತದೆ › ವಿವಾಹ
ಸಂಬಂಧಗಳು
ವಿವಾಹ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಇಬ್ರಿ 13:4
ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.ಆದಿ 2:24
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.ಜ್ಞಾನೋ 18:22
ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.1 ಪೇತ್ರ 3:7
ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.ಆದಿ 2:18
ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.ಎಫೆ 5:25
ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.ಜ್ಞಾನೋ 19:14
ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.ಕೊಲೊ 3:19
ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.ಮತ್ತಾ 19:4–6
ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು, ‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’ ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಅಂದನು.ಜ್ಞಾನೋ 31:10
ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು? ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು