Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಹಣ

ಜೀವನ ಮತ್ತು ಕೆಲಸ

ಹಣ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 15 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಜ್ಞಾನೋ 22:7ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.
ಇಬ್ರಿ 13:5ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.
ಲೂಕ 14:28ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ?
1 ತಿಮೊ 6:10ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.
ಮತ್ತಾ 6:24“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.
ಜ್ಞಾನೋ 13:11ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು, ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು.
ಜ್ಞಾನೋ 3:9–10ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು. ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು.
ಪ್ರಸ 5:10ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ. ಇದೂ ಸಹ ವ್ಯರ್ಥವೇ.
ಜ್ಞಾನೋ 21:20ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.
ಲೂಕ 16:11ಹೀಗಿರುವುದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಾರು?
2 ಕೊರಿ 9:6–7ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ. ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.
ಲೂಕ 12:15ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.
ಜ್ಞಾನೋ 27:23–24ನಿನ್ನ ಹಿಂಡುಗಳ ಸ್ಥಿತಿಯನ್ನು ಚೆನ್ನಾಗಿ ತಿಳಿದುಕೊಂಡಿರು, ನಿನ್ನ ಮಂದೆಗಳ ಮೇಲೆ ಮನಸ್ಸಿಡು. ಸಂಪತ್ತು ಶಾಶ್ವತವಾಗಿರುವುದಿಲ್ಲವಷ್ಟೆ, ಕಿರೀಟವು ತಲತಲಾಂತರಗಳ ವರೆಗೆ ನಿಂತೀತೋ?
1 ತಿಮೊ 6:17–19ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು. ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ಪರೋಪಕಾರಮಾಡುವವರೂ ಆಗಿದ್ದು, ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು.
1 ತಿಮೊ 5:8ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು