ಮುಖಪುಟ › ಬೈಬಲ್ ಏನು ಹೇಳುತ್ತದೆ › ನೆರೆಯವನನ್ನು ಪ್ರೀತಿಸುವುದು
ಸಂಬಂಧಗಳು
ನೆರೆಯವನನ್ನು ಪ್ರೀತಿಸುವುದು ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 14 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಯಾಜ 19:18
“‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.ಮಾರ್ಕ 12:31
‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ ಎರಡನೆಯ ಆಜ್ಞೆ. ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ” ಎಂದು ಉತ್ತರ ಕೊಟ್ಟನು.ಮತ್ತಾ 22:39
ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ, ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.ಯಾಕೋ 2:8
ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ.ರೋಮಾ 13:8–10
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ. ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ. ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಆದಕಾರಣ ಪ್ರೀತಿಯಿಂದಲೇ ಧರ್ಮಶಾಸ್ತ್ರವು ನೆರವೇರುತ್ತದೆ.ಗಲಾ 5:14
“ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು” ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಗಿದೆ.ಗಲಾ 6:2
ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.ಮತ್ತಾ 7:12
ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.ಫಿಲಿಪ್ಪಿ 2:4
ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.ಇಬ್ರಿ 13:16
ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.1 ಯೋಹಾ 3:17–18
ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ? ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.1 ಪೇತ್ರ 4:9
ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.1 ಥೆಸ 5:14
ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.ಜ್ಞಾನೋ 14:21
ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು