Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಹೊಸ ಆರಂಭಗಳು

ಜೀವನ ಮತ್ತು ಕೆಲಸ

ಹೊಸ ಆರಂಭಗಳು ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಯೆಶಾ 43:18–19ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನ ಕಾರ್ಯಗಳನ್ನು ಮರೆತುಬಿಡಿರಿ. ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ, ಅರಣ್ಯದಲ್ಲಿ ನದಿಗಳನ್ನು ಹರಿಸುವೆನು.
2 ಕೊರಿ 5:17ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.
ಎಫೆ 4:22–24ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು. ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.
ಪ್ರಲಾ 3:22–24ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು. ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ನಂಬಿಗಸ್ತಿಕೆಯು ದೊಡ್ಡದು! “ಯೆಹೋವನೇ ನನ್ನ ಪಾಲು, ಆದಕಾರಣ ಆತನನ್ನು ನಿರೀಕ್ಷಿಸುವೆನು” ಎಂದು ನನ್ನ ಅಂತರಾತ್ಮವು ಅಂದುಕೊಳ್ಳುತ್ತದೆ.
1 ಪೇತ್ರ 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
ರೋಮಾ 12:1–2ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು. ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
ಪ್ರಸ 3:1ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಸಮಯವಿದೆ, ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.
ಪ್ರಕ 21:5ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ” ಎಂದನು. ಮತ್ತು ಒಬ್ಬನು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ” ಎಂದು ಹೇಳಿದನು.
2 ಕೊರಿ 4:16–18ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ. ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ. ನಾವು ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು.
ಇಬ್ರಿ 12:1–2ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು