ಮುಖಪುಟ › ಬೈಬಲ್ ಏನು ಹೇಳುತ್ತದೆ › ವೃದ್ಧಾಪ್ಯ
ಜೀವನ ಮತ್ತು ಕೆಲಸ
ವೃದ್ಧಾಪ್ಯ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಜ್ಞಾನೋ 16:31
ನರೆಗೂದಲೇ ಸುಂದರ ಕಿರೀಟವು, ಅದು ಧರ್ಮಮಾರ್ಗದಲ್ಲಿ ದೊರಕುವುದು.ಯೆಶಾ 46:4
ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು. ನಾನೇ ಉಂಟುಮಾಡಿದೆನು, ನಾನೇ ಹೊರುವೆನು. ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು.ಜ್ಞಾನೋ 20:29
ಯುವಕರಿಗೆ ಬಲವು ಭೂಷಣ, ಮುದುಕರಿಗೆ ನರೆಯು ಒಡವೆ.ಯಾಜ 19:32
“‘ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.2 ಕೊರಿ 4:16
ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.ಯೋಬ 12:12
ಜ್ಞಾನವು ವೃದ್ಧರಲ್ಲೇ ಅಡಗಿದೆಯೋ? ದಿರ್ಘಾಷ್ಯರಲ್ಲಿ ವಿವೇಕವಿದೆ.ಕೀರ್ತ 71:18
ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.ಕೀರ್ತ 71:9
ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ; ನನ್ನ ಬಲವು ಕುಂದಿದಾಗ ಕೈಬಿಡಬೇಡ.ಕೀರ್ತ 92:14
ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು.ಜ್ಞಾನೋ 17:6
ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ, ತಂದೆತಾಯಿಗಳು ಮಕ್ಕಳಿಗೆ ಭೂಷಣ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು