Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಮಕ್ಕಳ ಪಾಲನೆ

ಸಂಬಂಧಗಳು

ಮಕ್ಕಳ ಪಾಲನೆ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 12 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಜ್ಞಾನೋ 22:6ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.
ಎಫೆ 6:4ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
1 ತಿಮೊ 5:8ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.
ಕೀರ್ತ 127:3ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.
ಜ್ಞಾನೋ 13:24ಬೆತ್ತ ಹಿಡಿಯದ ತಂದೆ ಮಗನಿಗೆ ಶತ್ರು, ಸುಶಿಕ್ಷಣವನ್ನು ನೀಡುವ ತಂದೆ ಮಗನಿಗೆ ಮಿತ್ರ.
ಜ್ಞಾನೋ 29:15ಬೆತ್ತ ಮತ್ತು ಬೆದರಿಕೆಗಳಿಂದ ಜ್ಞಾನವುಂಟಾಗುವುದು, ಶಿಕ್ಷಿಸದೆ ಬಿಟ್ಟ ಹುಡುಗನು ತಾಯಿಯ ಮಾನವನ್ನು ಕಳೆಯುವನು.
ಜ್ಞಾನೋ 29:17ಮಗನನ್ನು ಶಿಕ್ಷಿಸು, ಅವನು ನಿನ್ನನ್ನು ಸಂತೋಷಪಡಿಸುವನು, ಅವನೇ ನಿನ್ನ ಆತ್ಮಕ್ಕೆ ಮೃಷ್ಟಾನ್ನವಾಗುವನು.
ಕೊಲೊ 3:21ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರನ್ನು ಮನಗುಂದಿಸಿಬೇಡಿರಿ.
ಧರ್ಮೋ 6:6–7ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು. ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.
ಜ್ಞಾನೋ 1:8–9ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ. ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ, ಕೊರಳಿಗೆ ಹಾರದಂತಿರುವುದು.
ಜ್ಞಾನೋ 19:18ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, ಹಾಳುಮಾಡಲು ಮನಸ್ಸು ಮಾಡಬೇಡ,
ಜ್ಞಾನೋ 15:5ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು, ಗದರಿಕೆಯನ್ನು ಗಮನಿಸುವವನು ಜಾಣನು.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು