Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ತಾಳ್ಮೆ

ಜೀವನ ಮತ್ತು ಕೆಲಸ

ತಾಳ್ಮೆ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

1 ಕೊರಿ 13:4–5ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ. ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ.
ರೋಮಾ 12:12ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.
2 ಪೇತ್ರ 3:9ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.
ರೋಮಾ 8:25ಆದರೆ ಕಾಣದಿರುವುದನ್ನು ನಾವು ಎದುರುನೋಡುವವರಾಗಿರುವುದರಿಂದ ತಾಳ್ಮೆಯಿಂದ ಕಾದುಕೊಂಡಿದ್ದೇವೆ.
ಕೀರ್ತ 27:14ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.
ಜ್ಞಾನೋ 15:1ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.
ಕೀರ್ತ 37:7ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.
ಗಲಾ 6:9ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.
ಎಫೆ 4:2ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.
ಕೊಲೊ 3:12ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು