Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಶಾಂತಿ

ಭಾವನೆಗಳು

ಶಾಂತಿ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಯೋಹಾ 16:33ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.
ಯೆಶಾ 26:3ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.
ಫಿಲಿಪ್ಪಿ 4:6–7ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.
2 ಥೆಸ 3:16ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.
ಯೋಹಾ 14:27“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
ಕೀರ್ತ 4:8ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.
ರೋಮಾ 8:6ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ.
ಕೀರ್ತ 119:165ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ, ಸಂಪೂರ್ಣ ಸಮಾಧಾನವಿರುತ್ತದೆ, ಅಂಥವರಿಗೆ ವಿಘ್ನಕರವಾದದ್ದೇನೂ ಇರುವುದಿಲ್ಲ.
ಕೀರ್ತ 29:11ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.
ಮತ್ತಾ 5:9ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು