Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಹಿಂಸೆ

ಕಷ್ಟದ ಸಮಯಗಳು

ಹಿಂಸೆ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಮತ್ತಾ 5:10ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು.
2 ತಿಮೊ 3:12ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.
ಯೋಹಾ 15:18“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ.
ಮತ್ತಾ 5:44ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.
2 ಕೊರಿ 12:10ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.
ಲೂಕ 6:22“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.
1 ಪೇತ್ರ 4:12–14ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ. ಆದರೆ ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.
ಮತ್ತಾ 10:22ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.
1 ಪೇತ್ರ 3:17ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ.
1 ಪೇತ್ರ 3:14ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು