ಮುಖಪುಟ › ಬೈಬಲ್ ಏನು ಹೇಳುತ್ತದೆ › ಯೋಜನೆಗಳು ಮತ್ತು ಭವಿಷ್ಯ
ಜೀವನ ಮತ್ತು ಕೆಲಸ
ಯೋಜನೆಗಳು ಮತ್ತು ಭವಿಷ್ಯ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 14 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಯೆರೆ 29:11
ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.ಜ್ಞಾನೋ 16:9
ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.ಜ್ಞಾನೋ 16:3
ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ, ನಿನ್ನ ಉದ್ದೇಶಗಳು ಸಫಲವಾಗುವವು.ಜ್ಞಾನೋ 19:21
ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.ಜ್ಞಾನೋ 21:5
ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ, ಆತುರಪಡುವವರಿಗೆಲ್ಲಾ ಕೊರತೆಯೇ.ಕೀರ್ತ 37:5
ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.ಜ್ಞಾನೋ 15:22
ಆಲೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹು ಮಂದಿ ಆಲೋಚನಾಪರರು ಇರುವಲ್ಲಿ ಅವು ನೆರವೇರುವವು.ಜ್ಞಾನೋ 3:5–6
ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು. ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.ಲೂಕ 14:28
ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ?ಯಾಕೋ 4:13–15
“ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ ಲಾಭವನ್ನು ಸಂಪಾದಿಸುತ್ತೇವೆ” ಎನ್ನುವವರೇ ಕೇಳಿರಿ. ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ. ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು “ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು” ಎಂದು ಹೇಳಬೇಕು.ಜ್ಞಾನೋ 27:1
ನಾಳೆ ಎಂದು ಕೊಚ್ಚಿಕೊಳ್ಳಬೇಡ, ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.ಯೆಶಾ 43:18–19
ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನ ಕಾರ್ಯಗಳನ್ನು ಮರೆತುಬಿಡಿರಿ. ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ, ಅರಣ್ಯದಲ್ಲಿ ನದಿಗಳನ್ನು ಹರಿಸುವೆನು.ಕೀರ್ತ 20:4
ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.ಜ್ಞಾನೋ 6:6–8
ಸೋಮಾರಿಯೇ, ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ಪಡೆದುಕೋ. ಅದಕ್ಕೆ ನಾಯಕ, ಅಧಿಕಾರಿ ಹಾಗೂ ಪ್ರಭುಗಳಿಲ್ಲದಿದ್ದರೂ, ಬೇಸಿಗೆಯಲ್ಲಿ ತನ್ನ ತೀನಿಯನ್ನು ಸಿದ್ಧಮಾಡುವುದು, ಸುಗ್ಗಿಯ ಕಾಲದಲ್ಲಿ ತನಗೆ ಬೇಕಾದಷ್ಟು ಆಹಾರವನ್ನು ಸಂಗ್ರಹಿಸಿಟ್ಟುಕೊಳ್ಳುವುದು.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು