ಮುಖಪುಟ › ಬೈಬಲ್ ಏನು ಹೇಳುತ್ತದೆ › ಬಡವರಿಗೆ ಸಹಾಯ ಮಾಡುವುದು
ಜೀವನ ಮತ್ತು ಕೆಲಸ
ಬಡವರಿಗೆ ಸಹಾಯ ಮಾಡುವುದು ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 15 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಜ್ಞಾನೋ 19:17
ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.ಜ್ಞಾನೋ 14:31
ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.1 ಯೋಹಾ 3:17–18
ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ? ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.ಗಲಾ 2:10
ಆದರೆ ನೀವು ನಮ್ಮಲ್ಲಿರುವ ಬಡವರನ್ನು ಮರೆಯಬಾರದೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು, ಹಾಗೆ ಮಾಡುವುದರಲ್ಲಿ ನಾನೂ ಆಸಕ್ತನಾಗಿದ್ದೆನು.ಜ್ಞಾನೋ 28:27
ಬಡವರಿಗೆ ದಾನಮಾಡುವವನು ಕೊರತೆಪಡನು, ಅವರನ್ನು ಕಂಡು ಕಾಣದಂತೆ ಇರುವವನು ಬಹುಶಾಪಕ್ಕೆ ಒಳಗಾಗುವನು.ಜ್ಞಾನೋ 22:9
ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.ಯಾಜ 25:35
“‘ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು.ಲೂಕ 14:12–14
ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನೆಂದರೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ, ನಿನ್ನ ಅಣ್ಣತಮ್ಮಂದಿರನ್ನಾಗಲಿ, ನಿನ್ನ ಬಂಧುಬಾಂಧವರನ್ನಾಗಲಿ, ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವುದು. ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ, ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.”ಜ್ಞಾನೋ 31:8–9
ಬಾಯಿಲ್ಲದವರಿಗೂ, ಹಾಳಾಗಿ ಹೋಗುತ್ತಿರುವವರೆಲ್ಲರಿಗೂ, ನ್ಯಾಯವಾಗುವಂತೆ ಬಾಯಿ ತೆರೆ. ಬಾಯನ್ನು ತೆರೆದು ನ್ಯಾಯವನ್ನು ತೀರಿಸು, ದೀನದರಿದ್ರರ ವ್ಯಾಜ್ಯ ಮಾಡು.ಅ. ಕೃ 20:35
ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.ಮತ್ತಾ 19:21
ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.ಜ್ಞಾನೋ 14:21
ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು.ಜ್ಞಾನೋ 29:7
ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು, ದುಷ್ಟನಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ.ಯಾಕೋ 2:15–16
ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ, ನಿಮ್ಮಲ್ಲಿ ಒಬ್ಬನು ಅವರಿಗೆ ದೈಹಿಕ ಅವಶ್ಯಕತೆಗಳನ್ನು ಪೂರೈಸದೆ “ಸಮಾಧಾನದಿಂದ ಹೋಗಿರಿ, ಬೆಚ್ಚಗೆ ಬೆಂಕಿಕಾಯಿಸಿಕೊಳ್ಳಿ, ಹೊಟ್ಟೆ ತುಂಬಾ ಊಟಮಾಡಿ” ಎಂದು ಹೇಳಿದರೆ ಪ್ರಯೋಜನವೇನು?ಯೆಶಾ 58:6–7
ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು, ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು