Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಸ್ತುತಿ ಮತ್ತು ಆರಾಧನೆ

ನಂಬಿಕೆ

ಸ್ತುತಿ ಮತ್ತು ಆರಾಧನೆ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಯೆಶಾ 61:3ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.
ಕೀರ್ತ 150:6ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ; ಯೆಹೋವನಿಗೆ ಸ್ತೋತ್ರ!
ಇಬ್ರಿ 13:15ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.
ಯೋಹಾ 4:24ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ” ಎಂದನು.
ಕೀರ್ತ 150:2ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ; ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ.
ಯೋಹಾ 4:23ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ.
ಕೀರ್ತ 106:1ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.
ಕೀರ್ತ 99:3ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು.
ಕೀರ್ತ 71:8ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ; ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು.
ಕೀರ್ತ 109:30ಯೆಹೋವನನ್ನು ಬಹಳವಾಗಿ ಕೊಂಡಾಡುವೆನು; ಜನಸಮೂಹದ ಮಧ್ಯದಲ್ಲಿ ಆತನನ್ನು ಕೀರ್ತಿಸುವೆನು.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು