Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಪ್ರಾರ್ಥನೆ

ನಂಬಿಕೆ

ಪ್ರಾರ್ಥನೆ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 13 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

1 ಥೆಸ 5:17ಎಡೆಬಿಡದೆ ಪ್ರಾರ್ಥನೆಮಾಡಿರಿ,
ಫಿಲಿಪ್ಪಿ 4:6ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.
ಯಾಕೋ 5:16ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.
ಯೆರೆ 33:3‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.
ಎಫೆ 6:18ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.
ಮಾರ್ಕ 11:24ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.
ಯೋಹಾ 15:7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.
ರೋಮಾ 8:26–27ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ. ಆದರೆ ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.
ಯೋಹಾ 14:14ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು.
ಯಾಕೋ 1:5ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.
ಯಾಕೋ 5:18ತಿರುಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಕೊಟ್ಟಿತು.
1 ಯೋಹಾ 5:14ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು.
ಯಾಕೋ 5:13ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು