Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಗರ್ವ

ಜೀವನ ಮತ್ತು ಕೆಲಸ

ಗರ್ವ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಫಿಲಿಪ್ಪಿ 2:3ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
ಜ್ಞಾನೋ 8:13ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.
1 ಸಮು 2:3“ಇನ್ನು ಮುಂದೆ ಗರ್ವದಿಂದ ಮಾತನಾಡಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗಿನೋಡುವನು.
ಜ್ಞಾನೋ 16:18ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.
ರೋಮಾ 12:3ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.
ಜ್ಞಾನೋ 16:5ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ, ಅವರಿಗೆ ದಂಡನೆ ಖಂಡಿತ.
ಯೆಶಾ 13:11ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.
ಜ್ಞಾನೋ 11:2ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ, ದೀನತೆಯಲ್ಲಿ ಸುಜ್ಞಾನ.
ಜ್ಞಾನೋ 29:23ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.
ಜ್ಞಾನೋ 27:2ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ, ಮತ್ತೊಬ್ಬನು ಹೊಗಳಿದರೆ ಹೊಗಳಲಿ, ಆತ್ಮಸ್ತುತಿ ಬೇಡ, ಪರನು ನಿನ್ನನ್ನು ಸ್ತುತಿಸಿದರೆ ಸ್ತುತಿಸಲಿ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು