ಮುಖಪುಟ › ಬೈಬಲ್ ಏನು ಹೇಳುತ್ತದೆ › ಸಂರಕ್ಷಣೆ
ಕಷ್ಟದ ಸಮಯಗಳು
ಸಂರಕ್ಷಣೆ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಜ್ಞಾನೋ 18:10
ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.ಯೆಶಾ 54:17
ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.ಯೆಶಾ 41:10
ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.ಕೀರ್ತ 46:1
1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು. ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.ಕೀರ್ತ 4:8
ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.2 ಥೆಸ 3:3
ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.ಕೀರ್ತ 32:7
ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. ಸೆಲಾಧರ್ಮೋ 31:6
ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.ಕೀರ್ತ 138:7
ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ, ನನ್ನನ್ನು ಚೈತನ್ಯಗೊಳ್ಳಿಸುವಿ, ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ, ನಿನ್ನ ಬಲಗೈ ನನ್ನನ್ನು ರಕ್ಷಿಸುವುದು.ಕೀರ್ತ 34:7
ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು