Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಜೀವನದ ಉದ್ದೇಶ

ನಂಬಿಕೆ

ಜೀವನದ ಉದ್ದೇಶ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 12 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ರೋಮಾ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
ಎಫೆ 2:10ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.
ಪ್ರಸ 12:13–14ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ. ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.
ಕೀರ್ತ 138:8ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು, ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.
ಜ್ಞಾನೋ 16:9ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.
1 ಪೇತ್ರ 2:9ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.
ರೋಮಾ 12:2ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
ಯೆರೆ 1:5“ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು.
ಕೀರ್ತ 20:4ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.
1 ಕೊರಿ 10:31ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.
ಕೀರ್ತ 37:5ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.
ಯೆಶಾ 43:7ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು