Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ವಿಶ್ರಾಂತಿ ಮತ್ತು ದಣಿವು

ಜೀವನ ಮತ್ತು ಕೆಲಸ

ವಿಶ್ರಾಂತಿ ಮತ್ತು ದಣಿವು ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಮತ್ತಾ 11:28–30“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.
ಯೆಶಾ 40:31ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.
ಯೆಶಾ 40:29ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.
ಯೆರೆ 31:25ನಾನು ಬಳಲಿದವರನ್ನು ತಂಪುಗೊಳಿಸಿ, ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ” ಎಂಬುದೇ.
ಕೀರ್ತ 37:7ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.
ಯೆಶಾ 40:28ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.
ಕೀರ್ತ 46:10“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.
ಇಬ್ರಿ 4:9–11ಆದಕಾರಣ ದೇವರ ಜನರಿಗೆ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು. ಹೇಗೆಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೋ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನ್ನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ. ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.
ಆದಿ 2:2ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು.
ಕೀರ್ತ 4:8ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು