ಮುಖಪುಟ › ಬೈಬಲ್ ಏನು ಹೇಳುತ್ತದೆ › ದುಃಖ ಮತ್ತು ಖಿನ್ನತೆ
ಭಾವನೆಗಳು
ದುಃಖ ಮತ್ತು ಖಿನ್ನತೆ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 15 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ತುಂಬಾ ಕಷ್ಟವಾಗಿದ್ದರೆ, ಒಬ್ಬರೇ ಅದನ್ನು ಹೊರಬೇಡಿ: ನೀವು ನಂಬುವ ಯಾರೊಂದಿಗಾದರೂ, ಯಾಜಕರು ಅಥವಾ ಸಭಾಪಾಲಕರೊಂದಿಗೆ, ಅಥವಾ ವೈದ್ಯರೊಂದಿಗೆ ಮಾತನಾಡಿ.
ಕೀರ್ತ 34:18
ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.ಯಾಕೋ 1:2–4
ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ. ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ. ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ.ಫಿಲಿಪ್ಪಿ 4:7
ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.ಯಾಕೋ 5:13
ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ.ಮತ್ತಾ 5:4
ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.ಪ್ರಕ 21:4
ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.2 ಕೊರಿ 7:6
ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು.ಕೀರ್ತ 30:5
ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.ಕೀರ್ತ 55:22
ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.ಜ್ಞಾನೋ 12:25
ಕಳವಳವು ಮನಸ್ಸನ್ನು ಕುಗ್ಗಿಸುವುದು, ಕನಿಕರದ ಮಾತು ಅದನ್ನು ಹಿಗ್ಗಿಸುವುದು.ಯೋಹಾ 14:1
“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.2 ಕೊರಿ 1:3–4
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು, ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.ಕೀರ್ತ 147:3
ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.ಕೀರ್ತ 23:4
ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.2 ಕೊರಿ 12:9
ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು