ಮುಖಪುಟ › ಬೈಬಲ್ ಏನು ಹೇಳುತ್ತದೆ › ಸತ್ಯವೇದ
ನಂಬಿಕೆ
ಸತ್ಯವೇದ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 15 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
2 ತಿಮೊ 3:16
ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ.ಇಬ್ರಿ 4:12
ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.ರೋಮಾ 15:4
ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.ಕೀರ್ತ 119:105
ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ, ನನ್ನ ದಾರಿಗೆ ಬೆಳಕೂ ಆಗಿದೆ.ಮತ್ತಾ 4:4
ಯೇಸು, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು’ ಎಂದು ಬರೆದಿದೆ” ಅಂದನು.ಯೆಹೋ 1:8
ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.ಕೀರ್ತ 119:11
ನಿನಗೆ ವಿರುದ್ಧವಾಗಿ ಪಾಪಮಾಡದಂತೆ, ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.ಕೀರ್ತ 119:18
ನನ್ನ ಕಣ್ಣುಗಳನ್ನು ತೆರೆ, ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.1 ಪೇತ್ರ 2:2
ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ.ಜ್ಞಾನೋ 30:5
ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು, ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.ಯೋಹಾ 17:17
ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.ಯೋಬ 23:12
ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.ಯೆಶಾ 55:11
ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.ಮಾರ್ಕ 13:31
ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.”ರೋಮಾ 10:17
ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು