ಮುಖಪುಟ › ಬೈಬಲ್ ಏನು ಹೇಳುತ್ತದೆ › ದೇವರನ್ನು ಹುಡುಕುವುದು
ನಂಬಿಕೆ
ದೇವರನ್ನು ಹುಡುಕುವುದು ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಮತ್ತಾ 6:33
ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.ಮತ್ತಾ 7:7–8
“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು; ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.ಇಬ್ರಿ 11:6
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.ಯೆರೆ 29:13
ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.1 ಪೂರ್ವ 16:11
ಯೆಹೋವನನ್ನೂ ಮತ್ತು ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.ಜ್ಞಾನೋ 8:17
ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.ಕೀರ್ತ 63:1
ದಾವೀದನು ಯೆಹೂದ ಸೀಮೆಯ ಅರಣ್ಯದಲ್ಲಿದ್ದಾಗ ರಚಿಸಿದ ಕೀರ್ತನೆ. ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ.ಧರ್ಮೋ 4:29
ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.ಕೀರ್ತ 9:10
ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.ಕೀರ್ತ 34:10
ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು