ಮುಖಪುಟ › ಬೈಬಲ್ ಏನು ಹೇಳುತ್ತದೆ › ಸ್ವನಿಯಂತ್ರಣ
ಜೀವನ ಮತ್ತು ಕೆಲಸ
ಸ್ವನಿಯಂತ್ರಣ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಜ್ಞಾನೋ 25:28
ಆತ್ಮವನ್ನು ಸ್ವಾಧೀನಮಾಡಿಕೊಳ್ಳದವನು ಗೋಡೆ ಬಿದ್ದ ಹಾಳೂರಿಗೆ ಸಮಾನ.ಗಲಾ 5:22–23
ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.2 ತಿಮೊ 1:7
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.1 ಕೊರಿ 10:13
ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.ಜ್ಞಾನೋ 16:32
ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.2 ಪೇತ್ರ 1:5–6
ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ, ಜ್ಞಾನಕ್ಕೆ ದಮೆಯನ್ನೂ, ದಮೆಗೆ ತಾಳ್ಮೆಯನ್ನೂ,1 ಪೇತ್ರ 4:7
ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.1 ಕೊರಿ 9:27
ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.1 ಪೇತ್ರ 5:8
ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.ಜ್ಞಾನೋ 29:11
ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು, ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು