ಮುಖಪುಟ › ಬೈಬಲ್ ಏನು ಹೇಳುತ್ತದೆ › ಸ್ವಾಭಿಮಾನ
ಭಾವನೆಗಳು
ಸ್ವಾಭಿಮಾನ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 15 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಕೀರ್ತ 139:14
ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.1 ಪೇತ್ರ 3:3–4
ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು. ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.ಆದಿ 1:27
ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”ಗಲಾ 1:10
ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.ಯೆರೆ 29:11
ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.ಆದಿ 2:7
ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.ರೋಮಾ 12:3
ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.ಎಫೆ 2:10
ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.ಗಲಾ 6:3
ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ.2 ಕೊರಿ 10:18
ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ. ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.ಜ್ಞಾನೋ 29:25
ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.ಲೂಕ 12:6–7
ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲ? ಆದಾಗ್ಯೂ ಅವುಗಳಲ್ಲಿ ಒಂದನ್ನೂ ದೇವರು ಮರೆತುಹೋಗುವುದಿಲ್ಲ. ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.ಯೆಶಾ 64:8
ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.ಲೂಕ 14:11
ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.1 ಸಮು 16:7
ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು