Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ನಿದ್ರೆ

ಜೀವನ ಮತ್ತು ಕೆಲಸ

ನಿದ್ರೆ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 11 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಕೀರ್ತ 4:8ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.
ಜ್ಞಾನೋ 3:24ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.
ಕೀರ್ತ 127:2ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.
ಕೀರ್ತ 91:5ರಾತ್ರಿಯಲ್ಲಿ ಭಯಹುಟ್ಟಿಸುವ ಯಾವುದಕ್ಕೂ, ಹಗಲಲ್ಲಿ ಹಾರಿಬರುವ ಬಾಣಕ್ಕೂ,
ಮತ್ತಾ 11:28“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.
ಜ್ಞಾನೋ 20:13ನಿದ್ರಾನಿರತನಾಗಿರಬೇಡ! ಬಡವನಾದೀಯೆ, ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ.
ಕೀರ್ತ 3:5ಯೆಹೋವನು ನನ್ನನ್ನು ಕಾಪಾಡುವವನು, ಆದುದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು.
ಮತ್ತಾ 8:24ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲೋಲಕಲ್ಲೋಲವಾಗಿ ದೋಣಿಯು ಅಲೆಗಳಿಂದ ಮುಚ್ಚುವಂತೆ ಆಯಿತು; ಆದರೆ ಯೇಸು ನಿದ್ರಿಸುತ್ತಿದ್ದನು.
ಕೀರ್ತ 121:3–4ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿನ್ನನ್ನು ಕಾಯುವವನು ತೂಕಡಿಸದಿರಲಿ. ಇಗೋ, ಇಸ್ರಾಯೇಲರನ್ನು ಕಾಯುವಾತನು, ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ.
ಜ್ಞಾನೋ 19:23ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು.
ಜ್ಞಾನೋ 6:22ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು, ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು