ಮುಖಪುಟ › ಬೈಬಲ್ ಏನು ಹೇಳುತ್ತದೆ › ಬಲ
ಕಷ್ಟದ ಸಮಯಗಳು
ಬಲ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಯೆಶಾ 40:31
ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.ಫಿಲಿಪ್ಪಿ 4:13
ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.ಕೀರ್ತ 18:32–34
ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ, ನನ್ನ ಮಾರ್ಗವನ್ನು ಸರಾಗ ಮಾಡುವವನೂ ದೇವರೇ. ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ; ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ. ಆತನೇ ನನಗೆ ಯುದ್ಧವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.ಹಬ 3:19
ನನ್ನ ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯಂತೆ ಚುರುಕುಗೊಳಿಸುತ್ತಾನೆ, ನಾನು ಬೆಟ್ಟ ಗುಡ್ಡಗಳಲ್ಲಿ ಓಡಾಡುವಂತೆ ಮಾಡುತ್ತಾನೆ. ಪ್ರಧಾನ ಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.ಯೆಶಾ 41:10
ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.1 ಪೂರ್ವ 22:13
ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲರಿಗೆ ಕೊಟ್ಟ ವಿಧಿನ್ಯಾಯಗಳನ್ನು ನೀನು ಕೈಕೊಳ್ಳುವುದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ.ಎಫೆ 6:10
ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.ಕೀರ್ತ 73:26
ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಬಲವು ನನ್ನ ಶಾಶ್ವತವಾದ ಪಾಲೂ ದೇವರೇ.1 ಪೂರ್ವ 16:11
ಯೆಹೋವನನ್ನೂ ಮತ್ತು ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.ಧರ್ಮೋ 31:6
ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು