Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಒತ್ತಡ

ಭಾವನೆಗಳು

ಒತ್ತಡ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 15 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಫಿಲಿಪ್ಪಿ 4:6–7ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.
ಯೋಹಾ 14:27“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
ಮತ್ತಾ 11:28–30“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.
ರೋಮಾ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ಕೀರ್ತ 55:22ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.
1 ಪೇತ್ರ 5:7ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.
ಮತ್ತಾ 6:34ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.
1 ಯೋಹಾ 4:18ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.
ಯೋಹಾ 16:33ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.
ಜ್ಞಾನೋ 12:25ಕಳವಳವು ಮನಸ್ಸನ್ನು ಕುಗ್ಗಿಸುವುದು, ಕನಿಕರದ ಮಾತು ಅದನ್ನು ಹಿಗ್ಗಿಸುವುದು.
ಕೀರ್ತ 118:5–6ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು. ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. ಮನುಷ್ಯನು ನನಗೆ ಏನು ಮಾಡಾನು?
ರೋಮಾ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
ಫಿಲಿಪ್ಪಿ 4:13ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
ಜ್ಞಾನೋ 3:5–6ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು. ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.
ಲೂಕ 6:48ಅವನು ಆಳವಾಗಿ ಅಗೆದು, ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು. ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು