Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಯಶಸ್ಸು

ಜೀವನ ಮತ್ತು ಕೆಲಸ

ಯಶಸ್ಸು ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಜ್ಞಾನೋ 16:3ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ, ನಿನ್ನ ಉದ್ದೇಶಗಳು ಸಫಲವಾಗುವವು.
ಫಿಲಿಪ್ಪಿ 4:13ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
ಕೀರ್ತ 37:4ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.
ಯೆರೆ 29:11ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
ಧರ್ಮೋ 8:18ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ, ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವುದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.
ಯಾಕೋ 4:10ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.
ಯೆಹೋ 1:8ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.
ಜ್ಞಾನೋ 3:5ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.
1 ಅರಸು 2:3ನಿನ್ನ ದೇವರಾದ ಯೆಹೋವನ ಅಪ್ಪಣೆಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆದುಕೋ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮವಿಧಿ ನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಯಾವುದನ್ನು ಮಾಡಿದರೂ ಎಲ್ಲಿಗೆ ಹೋದರೂ ಸಫಲನಾಗುವಿ.
ಮತ್ತಾ 16:26ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು