ಮುಖಪುಟ › ಬೈಬಲ್ ಏನು ಹೇಳುತ್ತದೆ › ಬಾಧೆ
ಕಷ್ಟದ ಸಮಯಗಳು
ಬಾಧೆ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ರೋಮಾ 8:18
ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ.ಪ್ರಕ 21:4
ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.ರೋಮಾ 5:3–5
ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ. ಏಕೆಂದರೆ ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು. ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.ಯಾಕೋ 1:2–4
ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ. ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ. ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ.2 ಕೊರಿ 4:17
ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.ಕೀರ್ತ 41:3
ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ, ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ.ಯೋಬ 30:17
ರಾತ್ರಿಯು ನನ್ನ ಎಲುಬುಗಳನ್ನು ಕೊರೆದು ಕೀಳುತ್ತದೆ, ನನ್ನನ್ನು ಕಚ್ಚುತ್ತಿರುವ ಸಂಕಟಗಳು ಸುಮ್ಮನಿರುವುದಿಲ್ಲ.1 ಪೇತ್ರ 5:10
ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.1 ಪೇತ್ರ 4:12–13
ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ. ಆದರೆ ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿಕೀರ್ತ 34:19
ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು