Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಶೋಧನೆ

ಕಷ್ಟದ ಸಮಯಗಳು

ಶೋಧನೆ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 12 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

1 ಕೊರಿ 10:13ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
ಮತ್ತಾ 26:41ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ” ಎಂದು ಹೇಳಿದನು.
ಯಾಕೋ 4:7ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.
ಇಬ್ರಿ 2:18ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ.
ಮತ್ತಾ 6:13ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು
ಎಫೆ 6:11ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
ಯಾಕೋ 1:12ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.
ಲೂಕ 22:40ಆತನು ಆ ಕ್ಲುಪ್ತ ಸ್ಥಳಕ್ಕೆ ಬಂದಾಗ ಅವರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.
1 ತಿಮೊ 6:9ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.
1 ಕೊರಿ 6:18ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
ಇಬ್ರಿ 4:15ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.
ಮಾರ್ಕ 14:38ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ದೇಹಕ್ಕೆ ಬಲ ಸಾಲದು” ಎಂದು ಹೇಳಿದನು.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು