ಮುಖಪುಟ › ಬೈಬಲ್ ಏನು ಹೇಳುತ್ತದೆ › ಸಮಯದ ಸದುಪಯೋಗ
ಜೀವನ ಮತ್ತು ಕೆಲಸ
ಸಮಯದ ಸದುಪಯೋಗ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಎಫೆ 5:16
ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ.ಕೀರ್ತ 90:12
ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು.ಕೊಲೊ 4:5
ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.ಯಾಕೋ 4:14
ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ.ಪ್ರಸ 3:1
ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಸಮಯವಿದೆ, ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.ಕೀರ್ತ 31:15
ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಂದ ನನ್ನನ್ನು ತಪ್ಪಿಸಿ ಕಾಪಾಡು.2 ಪೇತ್ರ 3:8
ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.ಎಫೆ 5:15
ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.ಜ್ಞಾನೋ 6:6–8
ಸೋಮಾರಿಯೇ, ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ಪಡೆದುಕೋ. ಅದಕ್ಕೆ ನಾಯಕ, ಅಧಿಕಾರಿ ಹಾಗೂ ಪ್ರಭುಗಳಿಲ್ಲದಿದ್ದರೂ, ಬೇಸಿಗೆಯಲ್ಲಿ ತನ್ನ ತೀನಿಯನ್ನು ಸಿದ್ಧಮಾಡುವುದು, ಸುಗ್ಗಿಯ ಕಾಲದಲ್ಲಿ ತನಗೆ ಬೇಕಾದಷ್ಟು ಆಹಾರವನ್ನು ಸಂಗ್ರಹಿಸಿಟ್ಟುಕೊಳ್ಳುವುದು.ಲೂಕ 14:28
ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ?ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು