Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಪರೀಕ್ಷೆಗಳು ಮತ್ತು ಕಷ್ಟದ ಸಮಯಗಳು

ಕಷ್ಟದ ಸಮಯಗಳು

ಪರೀಕ್ಷೆಗಳು ಮತ್ತು ಕಷ್ಟದ ಸಮಯಗಳು ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 12 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಯಾಕೋ 1:2–4ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ. ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ. ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ.
ಯೆಶಾ 41:10ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
ಯೋಹಾ 16:33ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.
ರೋಮಾ 8:18ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ.
ಯಾಕೋ 1:12ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.
ರೋಮಾ 5:3–5ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ. ಏಕೆಂದರೆ ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು. ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.
ಯೆಹೋ 1:9ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.
ರೋಮಾ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
1 ಪೇತ್ರ 4:12–13ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ. ಆದರೆ ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ
ಯೆರೆ 29:11–13ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ. ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು. ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.
ಫಿಲಿಪ್ಪಿ 4:13ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
ಕೀರ್ತ 9:9–10ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು. ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು