Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ದೇವರಲ್ಲಿ ಭರವಸೆ

ನಂಬಿಕೆ

ದೇವರಲ್ಲಿ ಭರವಸೆ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಜ್ಞಾನೋ 3:5ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.
ಕೀರ್ತ 37:5ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.
ಕೀರ್ತ 9:10ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.
ಕೀರ್ತ 56:3–4ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು. ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಏನು ಮಾಡಾರು?
ಕೀರ್ತ 28:7ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.
ರೋಮಾ 15:13ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.
ಕೀರ್ತ 46:10“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.
ಕೀರ್ತ 112:7ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು.
ಯೆಹೋ 1:9ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.
ಜ್ಞಾನೋ 3:6ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು