ಮುಖಪುಟ › ಬೈಬಲ್ ಏನು ಹೇಳುತ್ತದೆ › ಐಕ್ಯತೆ
ಸಂಬಂಧಗಳು
ಐಕ್ಯತೆ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
1 ಕೊರಿ 1:10
ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.ಕೀರ್ತ 133:1
ಯಾತ್ರಾಗೀತೆ; ದಾವೀದನದು. ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!ಎಫೆ 4:3
ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ.1 ಪೇತ್ರ 3:8
ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.2 ಕೊರಿ 13:11
ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.ಯೋಹಾ 17:23
ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.1 ಕೊರಿ 12:12
ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವೂ ಅನೇಕವಾಗಿದ್ದು ಒಂದೇ ದೇಹವಾಗಿದೆಯೋ, ಹಾಗೆಯೇ ಕ್ರಿಸ್ತನು ಇದ್ದಾನೆ.ಫಿಲಿಪ್ಪಿ 2:2
ನೀವೆಲ್ಲರು ಒಂದೇ ಮನಸ್ಸುವುಳ್ಳವರಾಗಿ, ಒಂದೇ ಪ್ರೀತಿಯುಳ್ಳವರಾಗಿ, ಅನ್ಯೋನ್ಯಭಾವವುಳ್ಳವರಾಗಿ ಹಾಗೂ ಒಂದೇ ಗುರಿಯಿಟ್ಟುಕೊಂಡವರಾಗಿ ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ.ರೋಮಾ 12:4–5
ಯಾಕೆಂದರೆ ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.ಕೊಲೊ 3:14
ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು