ಮುಖಪುಟ › ಬೈಬಲ್ ಏನು ಹೇಳುತ್ತದೆ › ದೇವರಿಗಾಗಿ ಕಾಯುವುದು
ನಂಬಿಕೆ
ದೇವರಿಗಾಗಿ ಕಾಯುವುದು ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 14 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಯೆಶಾ 40:31
ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.ಕೀರ್ತ 27:14
ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.ಕೀರ್ತ 37:7
ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.ಪ್ರಲಾ 3:25
ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಮತ್ತು ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ.ಯೆಶಾ 30:18
ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.ಕೀರ್ತ 130:5
ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ.ಮೀಕ 7:7
ನಾನಂತು ಯೆಹೋವನನ್ನು ಎದುರುನೋಡುವೆನು. ನನ್ನ ರಕ್ಷಕನಾದ ದೇವರನ್ನು ನಿರೀಕ್ಷಿಸಿಕೊಂಡಿರುವೆ. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು.ಯಾಕೋ 5:7–8
ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು. ನೀವೂ ತಾಳ್ಮೆಯಿಂದಿರಿ, ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ ಕರ್ತನ ಬರೋಣವು ಹತ್ತಿರವಾಯಿತು.ಕೀರ್ತ 33:20
ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; ನಮ್ಮ ಸಹಾಯವೂ, ಗುರಾಣಿಯೂ ಆತನೇ.ಕೀರ್ತ 62:5
ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ.ಹಬ 2:3
ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.ಕೀರ್ತ 37:34
ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ.ಯೆಶಾ 64:4
ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.ಕೀರ್ತ 38:15
ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು