ಮುಖಪುಟ › ಬೈಬಲ್ ಏನು ಹೇಳುತ್ತದೆ › ಜ್ಞಾನ
ಜೀವನ ಮತ್ತು ಕೆಲಸ
ಜ್ಞಾನ ಕುರಿತು ಬೈಬಲ್ ಏನು ಹೇಳುತ್ತದೆ
ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 10 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.
ಯಾಕೋ 1:5
ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.ಜ್ಞಾನೋ 1:7
ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.ಯಾಕೋ 3:17
ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.ಎಫೆ 5:15
ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.ಜ್ಞಾನೋ 2:6
ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.ಮತ್ತಾ 10:16
“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.ಯಾಕೋ 3:13–14
ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ. ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.ಕೀರ್ತ 111:10
ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.ಪ್ರಸ 7:12
ಧನವು ಹೇಗೊ ಹಾಗೆ ಜ್ಞಾನವು ಆಶ್ರಯ. ಜ್ಞಾನಕ್ಕೆ ವಿಶೇಷವೇನೆಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬುದೇ.ಜ್ಞಾನೋ 19:20
ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು