Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಮಾತು ಮತ್ತು ನುಡಿ

ಸಂಬಂಧಗಳು

ಮಾತು ಮತ್ತು ನುಡಿ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 15 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಎಫೆ 4:29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.
ಜ್ಞಾನೋ 18:21ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು,
ಯಾಕೋ 1:26ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.
ಜ್ಞಾನೋ 15:1ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.
ಜ್ಞಾನೋ 21:23ತನ್ನ ಬಾಯನ್ನೂ, ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು.
ಜ್ಞಾನೋ 12:18ಕತ್ತಿ ತಿವಿದ ಹಾಗೆ ದುಡುಕಿ ಮಾತನಾಡುವವರುಂಟು, ಜ್ಞಾನವಂತರ ಮಾತು ಸ್ವಸ್ಥತೆಯನ್ನು ತರುವುದು.
ಜ್ಞಾನೋ 15:4ಸಂತೈಸುವ ನಾಲಿಗೆ ಜೀವವೃಕ್ಷವು, ಬಲತ್ಕರಿಸುವ ನಾಲಿಗೆ ಮನಮುರಿಯುವುದು.
1 ಪೇತ್ರ 3:10ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ, “ಜೀವವನ್ನು ಬಯಸುತ್ತಾ ಸುದಿನಗಳನ್ನು ನೋಡುವುದಕ್ಕೆ ಕಾದಿರುವಾತನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನು ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನು ಬಿಗಿಹಿಡಿದುಕೊಳ್ಳಲಿ.
ಕೀರ್ತ 141:3ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು, ನನ್ನ ತುಟಿಗಳೆಂಬ ಕದವನ್ನು ಕಾಯಿ.
ಜ್ಞಾನೋ 10:19ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ.
ಯಾಕೋ 3:8ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿದೆ.
ಕೀರ್ತ 19:14ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.
ಕೀರ್ತ 34:13ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.
ಮತ್ತಾ 15:11ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ. ಬಾಯೊಳಗಿಂದ ಹೊರಗೆ ಬರುವಂಥ ಮಾತು ಮನುಷ್ಯನನ್ನು ಅಶುದ್ಧಗೊಳಿಸುವುದು” ಎಂದು ಹೇಳಿದನು.
ಜ್ಞಾನೋ 16:24ಸವಿನುಡಿಯು ಜೇನುಕೊಡ, ಅದು ಆತ್ಮಕ್ಕೆ ಸಿಹಿ, ಎಲುಬಿಗೆ ಕ್ಷೇಮ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು