Bible Explorer ಆ್ಯಪ್ ಪಡೆಯಿರಿ

ಮುಖಪುಟ › ಬೈಬಲ್ ಏನು ಹೇಳುತ್ತದೆ › ಕೆಲಸ

ಜೀವನ ಮತ್ತು ಕೆಲಸ

ಕೆಲಸ ಕುರಿತು ಬೈಬಲ್ ಏನು ಹೇಳುತ್ತದೆ

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ 13 ವಚನಗಳು, ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನಿಂದ ಪೂರ್ಣವಾಗಿ ಉಲ್ಲೇಖಿಸಲಾಗಿದೆ.

ಕೊಲೊ 3:23ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.
ಜ್ಞಾನೋ 16:3ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ, ನಿನ್ನ ಉದ್ದೇಶಗಳು ಸಫಲವಾಗುವವು.
ಜ್ಞಾನೋ 14:23ಶ್ರಮೆಯಿಂದ ಸಮೃದ್ಧಿ, ಹರಟೆಯಿಂದ ಕೊರತೆ.
ಜ್ಞಾನೋ 13:4ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.
ಜ್ಞಾನೋ 12:24ಚುರುಕುಗೈಯವನಿಗೆ ರಾಜ್ಯಾಧಿಕಾರ, ಮೈಗಳ್ಳನಿಗೆ ದಾಸತ್ವದ ಬದುಕು.
2 ಥೆಸ 3:10–12ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಊಟಮಾಡಬಾರದು” ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ. ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ. ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ.
ಆದಿ 2:15ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು.
ಕೀರ್ತ 90:17ನಮ್ಮ ಯೆಹೋವ ದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ. ನಾವು ಕೈ ಹಾಕಿದ ಕೆಲಸವನ್ನು ನಮಗೆ ಸಫಲಪಡಿಸು; ನಾವು ಕೈಹಾಕಿದ ಕೆಲಸವನ್ನು ಸಫಲ ವಾಗುವಂತೆ ಮಾಡು.
ಪ್ರಸ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.
1 ತಿಮೊ 5:8ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.
2 ತಿಮೊ 2:6ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಪಟ್ಟ ಕೃಷಿಕನಿಗೆ ದೊರೆಯುತ್ತದೆ.
ಜ್ಞಾನೋ 12:11ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು, ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.
ಪ್ರಸ 3:12–13ಮನುಷ್ಯರು ತಮ್ಮ ಜೀವಮಾನದಲ್ಲೆಲ್ಲಾ ಉಲ್ಲಾಸವಾಗಿ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಅವರಿಗೆ ಮೇಲಿಲ್ಲವೆಂದು ನಾನು ಗ್ರಹಿಸಿದ್ದೇನೆ. ಇದಲ್ಲದೆ ಪ್ರತಿಯೊಬ್ಬನೂ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ನಾನಾ ಪ್ರಯಾಸಗಳಲ್ಲಿಯೂ ಸುಖವನ್ನನುಭವಿಸುವುದು ದೇವರ ಅನುಗ್ರಹವೇ ಎಂದು ನನಗೆ ಗೊತ್ತಿದೆ.

ಈ ವಿಷಯಕ್ಕಾಗಿ ಓದುಗರು ಹೆಚ್ಚಾಗಿ ಆಶ್ರಯಿಸುವ ವಚನಗಳಿವು — ಅದರ ಬಗ್ಗೆ ಬೋಧನೆಯಲ್ಲ. ಪ್ರತಿಯೊಂದನ್ನೂ ಅದರ ಅಧ್ಯಾಯದಲ್ಲಿ ಓದಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು